ಶುಕ್ರವಾರ, ಅಕ್ಟೋಬರ್ 23, 2015

ಸರ್ಕಾರಿ ಉದ್ಯೋಗದ ಮಹಿಳಾ ಮೀಸಲಾತಿ ಶೇ.33ಕ್ಕೆ ಏರಿಕೆ.








ಬೆಂಗಳೂರು,ಅ.22-ಸರ್ಕಾರಿ ಉದ್ಯೋಗದ ನೇಮಕಾತಿ ಸಂದರ್ಭದಲ್ಲಿ  ನೀಡಲಾಗುತ್ತಿದ್ದ ಮಹಿಳಾ ಮೀಸಲಾತಿಯನ್ನು ಶೇ.30ರಿಂದ 33ಕ್ಕೆ ಹೆಚ್ಚಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.  2015ರ ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ) ನಿಯಮಗಳ ಪ್ರಕಾರ ಇನ್ನು ಮುಂದೆ ನಡೆಯುವ ಸರ್ಕಾರಿ ಉದ್ಯೋಗಗಳ ನೇಮಕಾತಿ ಸಂದರ್ಭದಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ದೊರೆಯಲಿದೆ. ಮಹಿಳಾ ಮೀಸಲಾತಿ ಹೊರತುಪಡಿಸಿ ಉಳಿದವರಿಗೆ ಶೇ.70ರಿಂದ ಶೇ.67ಕ್ಕೆ  ಇಳಿಸಲಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ತಿದ್ದುಪಡಿ ಕರಡನ್ನು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು.

ಮಹಿಳಾ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ